ಉಡುಪಿ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಪಾರ್ಟ್ ಮೆಂಟ್ ಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಣಿಪಾಲ ಸಮೀಪದ ಪೆರಂಪಳ್ಳಿಯ ಅಪಾರ್ಟ್ ಮೆಂಟ್‌ನಲ್ಲಿ ಈ ಘಟನೆ ನಡೆದಿದೆ.ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ ನಿವಾಸಿ ಅಮೀನಾ ಬೇಗಂ (55) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನಿರ್ದೇಶನದಂತೆ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ ಎಸ್ಸೈ ಅನೀಲ್, ಎಎಸ್ಸೈ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ಅವರನ್ನೊಳಗೊಂಡ ತಂಡ ಅರ್ಪಾಟ್ ಮೆಂಟ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿ ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಹಾಸನ ಜಿಲ್ಲೆಯ ಹಿರೀಸಾವೆ ಗ್ರಾಮದ ರವೀಶ್ ಎಂಬಾತನ ಬಂಧನಕ್ಕೆ ಮಣಿಪಾಲ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.












