ಉಡುಪಿ: ಸರಕಾರಿ ಸಂಯುಕ್ತ ಪ್ರೌಢ ಶಾಲೆ ಮಣಿಪುರ ಇದರ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ 32.80 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು (ಜೂ.25) ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಣಿಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೈತ್ರಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ರಮೇಶ್ ಪೂಜಾರಿ, ಸದಸ್ಯರಾದ ಮಹಮ್ಮದ್ ಷರೀಫ್, ಗೋವಿಂದ ಭಟ್, ಜಾನ್ ಸಿಕೈರಾ, ಹಾಜಿ ಹಸನ್ ಶೇಖ್ ಅಹಮ್ಮದ್, ಬಿಂದು ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಪೌಢಶಾಲಾ ಮುಖ್ಯೋಪಾಧ್ಯಾಯರಾದ ರೂಪರೇಖಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಯಂತಿ ಉಪಸ್ಥಿತರಿದ್ದರು.