ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ: ನಾಳೆ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ.

ಕುಂದಾಪುರ: ಮರವಂತೆ- ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ, ನಾವುಂದದ ನವೀಕೃತ ಪ್ರಧಾನ ಕಚೇರಿ ಹಾಗೂ ಮೇಲಂತಸ್ತಿನ ಕಟ್ಟಡದ ಉದ್ಘಾಟನೆ ಜೂ. 15 ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ರಾಜ್ಯ ಸಹಕಾರಿ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದಾರೆ.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎಂ. ಮಹೇಶ ಹೆಗ್ಡೆ ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ, ಕೆ.ಆರ್. ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ಕುಂದಾಪುರದ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ನಾವುಂದ ಗ್ರಾ.ಪಂ. ಅಧ್ಯಕ್ಷ ನರಸಿಂಹ ದೇವಾಡಿಗ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಆಳ್ವೆಗದ್ದೆ, ಉಪಾಧ್ಯಕ್ಷ ಎಂ ಚಂದ್ರಶೀಲ ಶೆಟ್ಟಿ, ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಯಿಂದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಉಡುಪಿ ಹಾಗೂ ಅತಿಥಿ ಕಲಾವಿದರ ಕೊಡುವಿಕೆಯಲ್ಲಿ ದಿ.ಕಾಳಿಂಗ ನಾವುಡ ವಿರಚಿತ ‘ನಾಗಶ್ರೀ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.