ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಆರೋಪಿಯ ಪತ್ತೆಗಾಗಿ ಬೆಂಗಳೂರು ಪೊಲೀಸರ ತಂಡ ಒಡಿಶಾಕ್ಕೆ ತೆರಳಿತ್ತು.
ಸೆಪ್ಟೆಂಬರ್ 21 ರಂದು ಬೆಂಗಳೂರಿನ ವೈಯಾಲಿಕಾವಲ್ ಪ್ರದೇಶದ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಹತ್ಯೆಮಾಡಿ ಬಳಿಕ ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿ ಇಟ್ಟು ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ.