ಮಣಿಪಾಲ: ವಿವಿಧ ವೃತ್ತಿಪರ ಕೋರ್ಸ್ ಗಳನ್ನು ನೀಡುತ್ತ ಬಂದಿರುವ ಮಣಿಪಾಲದಲ್ಲಿರುವ MSDC (ಮಣಿಪಾಲ ಕೌಶಲ್ಯ ಅಭಿವೃದ್ದಿ ಕೇಂದ್ರ)ದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಮಾ. 8 ರಂದು ಬೆಳಿಗ್ಗೆ 10.30 ರಿಂದ ವಿಶೇಷ ಕಾರ್ಯಕ್ರಮವನ್ನು MSDC Conference hall ನಲ್ಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರದ ಐದು ಸಾಧಕ ಮಹಿಳೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಪೂರ್ತಿದಾಯಕ ಕಾರ್ಯಕ್ರಮ ಇದಾಗಿದ್ದು, ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು MSDC ಪ್ರಕಟಣೆಯಲ್ಲಿ ತಿಳಿಸಿದೆ.












