ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮರಿಯಾಡಿ ನಿವಾಸಿ ಅಹ್ಮದ್ ಬಾವ (50) ಅವರು ಮೃತಪಟ್ಟಿದ್ದಾರೆ.
ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರೊಂದು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಅಹ್ಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಂಜೆ ವೇಳೆ ಮೃತಪಟ್ಟಿದ್ದಾರೆ.