ಉಡುಪಿ: ಪಶ್ಚಿಮಘಟ್ಟ ಹಾಗೂ ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಉಡುಪಿ ನಗರದ ಜೀವನದಿ ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೇ ತಿಂಗಳ ಅಂತ್ಯದಲ್ಲಿ ಬತ್ತಿಹೋಗಿದ್ದ ಸ್ವರ್ಣೆ, ಇದೀಗ ಮೈದುಂಬಿ ಹರಿಯುತ್ತಿದ್ದಾಳೆ.
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ವರ್ಣಾ ನದಿ ಸಂಪೂರ್ಣ ಭರ್ತಿಯಾಗಿದೆ. ನದಿ ತುಂಬಿ ಹರಿಯುತ್ತಿರುವುದರಿಂದ ಕೃಷಿಕರಲ್ಲಿ ಮಂದಹಾಸ ಮೂಡಿದರೆ, ತಗ್ಗು ಪ್ರದೇಶದ ಜನರಲ್ಲಿ ಆತಂಕ ಶುರುವಾಗಿದೆ. ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಮನೆಗೆ ನೀರು ನುಗ್ಗುವ ಭೀತಿ ಉಂಟಾಗಿದೆ. ಅಲ್ಲದೆ, ಹಿರಿಯಡ್ಕದ ಬಜೆ ಡ್ಯಾಮ್ ನಲ್ಲಿ ಹೊರ ಹರಿವು ಹೆಚ್ಚಳವಾಗಿದ್ದು, ಹೀಗಾಗಿ ನದಿ ಪಕ್ಕದಲ್ಲಿರುವ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.