ಉಡುಪಿ: ಸಂಬಂಧಿಕರೊಬ್ಬರ ಜೀವ ಉಳಿಸಲು ಹೋಗಿ ಉಪನ್ಯಾಸಕಿಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಮೃತಪಟ್ಟ ಮಹಿಳೆ. ಇವರು 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಸೋಂಕಿಗೆ ತುತ್ತಾಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯರಾಗಿದ್ದರು. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ. ಅರ್ಚನಾ ಅವರ ಅಕಾಲಿಕ ನಿಧನದಿಂದ ಸಂಬಂಧಿಕರು, ಆತ್ಮಣಿಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.