ಉಡುಪಿ: ಕುಂದಾಪುರದ ಬಿ.ಜಿ ರಾಮಕೃಷ್ಣ ಎಂಬವರಿಗೆ ಸರಕಾರ ಪ್ರಶಸ್ತಿ ನೀಡಿ ಬಳಿಕ ವಾಪಸ್ ಪಡೆದದ್ದು ಖಂಡನೀಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, , ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ವಿಚಾರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲಾಯಿತು. ಆದರೆ ರಾಮಕೃಷ್ಣ ಅವರು ಒಬ್ಬ ಶಿಕ್ಷಕನಾಗಿ ಸಮಾನ ವಸ್ತ್ರ ಸಂಹಿತೆಯ ಭಾಗವಾಗಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ತಡೆದಿದ್ದರು. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗೆ ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆದಿರುವುದು ಖಂಡನೀಯ. ರಾಜ್ಯ ಸರ್ಕಾರ ವಾಪಸ್ ಪಡೆದಿರುವ ಪ್ರಶಸ್ತಿಯನ್ನು ಅವರಿಗೆ ಮತ್ತೆ ಸಿಗುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಯುವ ಮೋರ್ಚಾ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.