ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು ೭೦೪ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಸಕ್ತ ಆಗಸ್ಟ್
ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ
ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ
ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್
https://kpp.karnataka.gov.in ನಲ್ಲಿಯೂ ಕೂಡ ಶೇ.50 ರ ರಿಯಾಯಿತಿ ಲಭ್ಯವಿದ್ದು, ಓದುಗರ ಇದರ
ಸದುಪಯೋಗಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.