ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ನ್ಯಾಯಪೀಠ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.