ಉಡುಪಿ: ಸಂಕ್ರಾಂತಿ ಮತ್ತು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು.
ರಾಜ್ಯ ಮತ್ತು ಹೊರ ರಾಜ್ಯದಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು. ಸಂಕ್ರಾಂತಿ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ದೇವಳಕ್ಕೆ ಭೇಟಿ ನೀಡಿದರು.
ಏಕಾದಶಿ ಇರುವ ಹಿನ್ನೆಲೆಯಲ್ಲಿ ಯಾವುದೇ ಸೇವೆಗಳು ಲಭ್ಯವಿರಲಿಲ್ಲ. ಆದರೂ ಭಕ್ತರು ದೇವಳಕ್ಕೆ ಭೇಟಿಕೊಟ್ಟು ದೇವರಲ್ಲಿ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡರು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ವಾಹನಗಳ ಪೂಜೆ ನೆರವೇರಿತು.