ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574892, ಅಥವಾ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/298134 ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.