ಕುಂದಾಪುರ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.












