ವಿದ್ಯಾರ್ಥಿವೇತನ ಸೌಲಭ್ಯ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು 1 ರಿಂದ 10 ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್
https://ssp.postmatric.karnataka.gov.in/CA/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574810, 2574811 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.