ವಿಯೆಟ್ನಾಂ ಇಂಡಿಯಾ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಣೇಶ ಮೊಗವೀರ ಆಯ್ಕೆ.

ಉಡುಪಿ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲ ಗಣೇಶ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದೆ.

ಇವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ದಿನಾಂಕ:28-11-2024ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.