ಉಡುಪಿ: ಬ್ರಹ್ಮಾವರ ತಾಲೂಕಿನ ಶಿರಿಯಾರ ನೈಲಾಡಿಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಇಂದು ಮುಂಜಾನೆ ನಡೆದಿದೆ.
ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತು ಕೊಂಡು ಹೋಗಿದ್ದು, ಇದನ್ನು ಕಂಡು ಮನೆಯವರು ಭಯಭೀತರಾಗಿದ್ದಾರೆ. ಚಿರತೆ ಬಂದು ನಾಯಿಯನ್ನು ಹೊತ್ತುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಹಿಂದಿನಿಂದಲೂ ಚಿರತೆ ಕಾಟ ವಿಪರೀತ ಆಗಿದ್ದು ಈ ಘಟನೆಯಿಂದ ಜನರಲ್ಲಿ ಭೀತಿ ಹುಟ್ಟಿಸಿದೆ. ಸಾರ್ವಜನಿಕರು ರಾತ್ರಿ ಸಂಚರಿಸುವುದೇ ಕಷ್ಟಕರವಾಗಿದೆ.