ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ರಾಜ್ಯದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ ಹಾಗೂ ಡಿಪ್ಲೋಮಾವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.