ಉಡುಪಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ೨೦೨೩-೨೪ ಮತ್ತು ಪ್ರಸಕ್ತ ಸಾಲಿನ
ಶಿಷ್ಯವೇತನಕ್ಕಾಗಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಹಾಗೂ ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೨ ಕೊನೆಯ ದಿನ. ಅರ್ಜಿಯನ್ನು ಅಕಾಡೆಮಿಯ ಪೇಸ್ ಬುಕ್ (facebook.com/karnatakasangeeta1978) ಮೂಲಕ ಪಡೆದು ವೆಬ್‌ಸೈಟ್ Sangeetanrityaacademy.karnataka.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2986168
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.