ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಶುಶ್ರೂಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.