ಮಂಗಳೂರು: ಮಂಗಳೂರು ಶ್ರೀ ರಾಮಾಶ್ರಮ ಪಿಯು ಕಾಲೇಜು (ತ್ರಿಶಾ ಸಂಸ್ಥೆಯ ಸಂಯೋಗದೊಂದಿಗೆ) ವತಿಯಿಂದ ನೂತನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ತ್ರಿಶಾ ಕಾಲೇಜಿನ ಪ್ರೊ.ಶೈನಿ ವಿ.ಪಿ. ಅವರು ವಿದ್ಯಾರ್ಥಿಗಳು ವಾಣಿಜ್ಯ, ವ್ಯವಹಾರ ಕ್ಷೇತ್ರ ದಲ್ಲಿ ಜ್ಞಾನ ಬೆಳೆಸಿಕೊಳ್ಳಬೇಕು. ದಿನಪತ್ರಿಕೆ ಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.
ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರ್ಕಟ್ಟೆ ಅವರು ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ತಮ್ಮಲ್ಲಿ ಕಲಿಯುವ ಆಸಕ್ತಿ, ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮನೋರಂಜನಾ ಸ್ಪರ್ಧೆ ಏರ್ಪಡಿಸಲಾಯಿತು.ಕಾಲೇಜಿನ ಉಪ ಪ್ರಾಂಶುಪಾಲರಾದ ಯಶಸ್ವಿನಿ ಯಶ್ ಪಾಲ್ ಸ್ವಾಗತಿಸಿ, ಅನ್ವಿತ ನಿರೂಪಿಸಿ, ಶರಣ್ಯ ಸುರೇಶ್ ವಂದಿಸಿದರು.