ಕುಂದಾಪುರ : ಜನವರಿ 02 ರಂದು ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಯ ಪಥ ನಿರಂತರವಾಗಿರಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.