ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆ.

ಕುಂದಾಪುರ: ಜುಲೈ 18 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆಯನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ರಾಜೇಶ್ ನಾಯಕ್ ಅವರು ಮಾತನಾಡಿ ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ದೆ, ಶಿಸ್ತು, ಸತತ ಪ್ರಯತ್ನದೊಂದಿಗೆ ಭಾವಿ ರಾಷ್ಟ್ರದ ಭಾಗ್ಯೋದಯ ಶಿಲ್ಪಿಗಳಾಬೇಕು ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ರಾಧಾ ಕೃಷ್ಣ ಶೆಣೈ ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾ ಕಾಂತ್ ರೇವಣಕರ್ ಉಪಸ್ಥಿತರಿದ್ದರು.

ಸತೀಶ್ ಹೆಮ್ಮಾಡಿ ಅವರಿಂದ ಜಾದು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಾದ ಅಮೂಲ್ಯ ಅತಿಥಿಗಳನ್ನು ಪರಿಚಯಿಸಿದರು, ವೈಷ್ಣವಿ ವಂದಿಸಿ, ಸಂಜನಾ ಸ್ವಾಗತಿಸಿ, ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿದರು.