ಸರಕಾರಿ ಯೋಜನೆಗಳ ಸಮರ್ಪಕ‌ ಅನುಷ್ಠಾನದಲ್ಲಿ‌ ಆಶಾ ಕಾರ್ಯಕರ್ತೆಯರ ಶ್ರಮ ಅಪಾರ: ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ

ಉಡುಪಿ: ವಯಸ್ಸಾಗಿದೆ ಎಂಬ ಕಾರಣಕ್ಕೆೆ ವೃದ್ಧರನ್ನು ಮೂಲೆಗುಂಪು ಮಾಡಬಾರದು. ಅವರಿಗೂ ಸರಿಯಾದ ಸಮಯವನ್ನು ಮೀಸಲಿಟ್ಟು ಆರೈಕೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಬಹಳಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಉಡುಪಿ ಶಾಖೆಯ ಆಶ್ರಯದಲ್ಲಿ ಜಿಲ್ಲೆೆಯ ಆಶಾ ಕಾರ್ಯಕರ್ತೆಯರಿಗೆ ನಗರದ ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ “ವೃದ್ಧರ ಸಮಗ್ರ ಆರೈಕೆ” ವಿಷಯದ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆೆಯಲ್ಲಿ ಕೇಂದ್ರ, ರಾಜ್ಯ ಸರಕಾರ ಘೋಷಣೆ ಮಾಡಿದ ಆರೋಗ್ಯ ಇಲಾಖೆಯ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿದ್ದು, ಇದರಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಅಪಾರವಾಗಿದೆ. ಸಂದಿಗ್ಧ ಪರಿಸ್ಥಿತಿಗಳಲ್ಲಿಯೂ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಇದು ನಿಜಕ್ಕೂ ಶ್ಲಾಘನೀಯವಾದುದು. ಮಹಿಳೆಯರು, ವೃದ್ಧರು, ವಿಕಲಚೇತನರು ಹೀಗೆ ಪ್ರತಿಯೊಬ್ಬರನ್ನು ಗೌರವಿಸಬೇಕು. ಅವರಿಗೆ ಸಿಗಬೇಕಾದ ಹಕ್ಕು, ಸವಲತ್ತುಗಳನ್ನು ತಿಳಿಹೇಳಬೇಕು ಎಂದರು.

ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಆರ್‌ಸಿಎಚ್ ಅಧಿಕಾರಿ ಡಾ ಜೋತ್ಸ್ನಾ ಬಿ.ಕೆ., ಜಿಲ್ಲಾ ಹಿರಿಯ ನಾಗರಿಕರ ಉಪಶಮನ ಆರೈಕೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ನಾಗರತ್ನ ಶಾಸ್ತ್ರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಲತಾ ನಾಯಕ್, ಹಿರಿಯ ವೈದ್ಯಾಧಿಕಾರಿ ಡಾ ಮಹೇಶ್ ಹೇಮಾದ್ರಿ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಾಲಯದ ಉಡುಪಿ ಶಾಖೆಯ ಸಂಚಾಲಕಿ ಸುಮಾ ಉಪಸ್ಥಿತರಿದ್ದರು. ರಘುರಾಮ್ ಸ್ವಾಗತಿಸಿ, ನಿರೂಪಿಸಿದರು.