ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಅಪಪ್ರಚಾರ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ‌. ಉಡುಪಿ- ಉಚ್ಚಿಲ‌ ದಸರಾಕ್ಕೆ ಎಕೆಎಂಎಸ್ ಸಂಸ್ಥೆಯವರು ಉಚಿತ ಬಸ್ ಸೇವೆ ಕಲ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳನ್ನು ದಸರಾ ಕಮಿಟಿಯವರು ಸನ್ಮಾನಿಸಿದ್ದರು‌. ಆದರೆ, ಇದಕ್ಕೆ ನನ್ನನ್ನು ಲಿಂಕ್ ಮಾಡಿ, ನನ್ನ ರಾಜಕೀಯ ಭವಿಷ್ಯವನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ. ನನ್ನ ಪೋಟೊವನ್ನು ಎಡಿಟ್ ಮಾಡಿ, ನನ್ನನ್ನು ಮೊಗವೀರ ಸಮುದಾಯದಿಂದ ದೂರ ಇಡಬೇಕೆಂಬ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ತೇಜೋವಧೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಈಗಾಗಲೇ ಮೊಗವೀರ ಮಹಾಜನ ಸಂಘದ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗುವವರೆಗೆ ನಾನು ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು