ಸಾಲಿಗ್ರಾಮ: ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಉದ್ಯಮದಲ್ಲಿ ಕನ್ನಡದ ನಾಮಫಲಕವನ್ನು ಅಳವಡಿಸುವುದು ಕಡ್ಡಾಯವಾಗಿದ್ದು, ಇತರೇ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕಗಳನ್ನು ದೊಡ್ಡದಾಗಿ ಅಳವಡಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.