ಉಡುಪಿ: ಭಾರತೀಯ ಲೆಕ್ಕಪರಿಶೋಧಕರ
ಸಂಸ್ಥೆ(ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ರಮ್ಯಾ ಎನ್. ಎಸ್ ಮತ್ತು ಸ್ವಾತಿ ಪೈ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.