ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ: 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ.

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇದರ ವಿದ್ಯಾರಣ್ಯ (ಲಿಟ್ಲ್‌ ಸ್ಟಾರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಜರುಗಿತು. ಏರ್ ಮಾರ್ಷಲ್‌ ರಮೇಶ್ ಕಾರ್ಣಿಕ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಸಂಸ್ಥೆಯಿಂದ ಏರ್ ಮಾರ್ಷಲ್ ರಮೇಶ್ ಕಾರ್ಣಿಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಖಜಾಂಚಿ ಭರತ್ ಶೆಟ್ಟಿ ಮುಖ್ಯ ಶಿಕ್ಷಕ ಪ್ರದೀಪ್ ಗೆ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.