ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸೂರಜ್ ಇಂಟರ್ ನ್ಯಾಷನಲ್ ಬಳಿ ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಮುಕ್ಕ ಯೂನಿಯನ್ ಬ್ಯಾಂಕ್ ಸಿಬ್ಬಂದಿ, ಮುಕ್ಕ ಚೆಕ್ ಪೋಸ್ಟ್ ಬಳಿಯ ನಿವಾಸಿ ರವಿ ಎಂದು ತಿಳಿದು ಬಂದಿದೆ.
ರವಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಪತ್ನಿಯನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.