ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ
ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ವೆಬ್‌ಸೈಟ್
https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in , ಸಹಾಯವಾಣಿ ಸಂಖ್ಯೆ: 8050770005
ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ದೂ.ಸಂಖ್ಯೆ: 1902 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












