ಉಡುಪಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟಿಪ್ಪರ್ ವೊಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯಡಕ ಸಮೀಪದ ಓಂತಿಬೆಟ್ಟು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಸಿಲುಕಿಕೊಂಡಿದ್ದು, ಆತನನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯವಾಗಿದೆ ಎಂದು ತಿಳಿದುಬಂದಿದೆ.