ಹಿರಿಯಡ್ಕ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನ; ತೀವ್ರವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು.

ಹಿರಿಯಡ್ಕ: ವೈಯಕ್ತಿಕ ಕಾರಣದಿಂದ ಮನನೊಂದು ಅ.8ರಂದು ಮನೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ 41ನೇ ಶಿರೂರು ಗ್ರಾಮದ ಕೊಡ್ಸಾಲ್‌ಬೆಟ್ಟು ನಿವಾಸಿ ಆನಂದ(64) ಎಂಬವರು ಅ.9ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.