ಹೆಜಮಾಡಿ: ಸಂಚರಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ; ತಪ್ಪಿದ ಭಾರೀ ದುರಂತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ಅದಾನಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಭಾರೀ ಅವಘಡ ತಪ್ಪಿಸಿದಂತಾಗಿದೆ.

ಉಡುಪಿ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು. ಬಸ್ಸಿನ ತಾಂತ್ರಿಕ ದೋಷವೇ ಈ ಅವಘಢಕ್ಕೆ ಕಾರಣ ಎನ್ನಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ.