ಹೆಬ್ರಿ: ಸ್ವಾತಂತ್ರ್ಯವನ್ನು ಉಳಿಸುವ, ಮುಂದಿನ ಪೀಳಿಗೆಗೆ ತಲುಪಿಸುವ, ಗುರುತರವಾದ ಜವಾಬ್ದಾರಿ ನಮ್ಮದು: ಎಚ್. ನಾಗರಾಜ್ ಶೆಟ್ಟಿ

ಹೆಬ್ರಿ: ನಾವು ಸ್ವಾತಂತ್ರ್ಯ ಪಡೆಯಲು ನಮ್ಮ ಹಿರಿಯರು ಮಾಡಿದಂತಹ ತ್ಯಾಗ, ಬಲಿದಾನಗಳನ್ನು ಇಂದಿನ ಯುವ ಪೀಳಿಗೆ ನೆನಪಿನಲ್ಲಿಟ್ಟುಕೊಳ್ಳಬೇಕು. ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸುವ, ಮುಂದಿನ ಪೀಳಿಗೆಗೆ ತಲುಪಿಸುವ, ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವು ಪಡೆದ ಸ್ವಾತಂತ್ರ್ಯದ ಮೌಲ್ಯವನ್ನು ನಮ್ಮ ಬದುಕಿನಲ್ಲಿ ಅಳವಡಿಸಿ, ಸೇವಾ ಮನೋಭಾವವನ್ನು ಇಟ್ಟುಕೊಂಡು ಜೀವನ ನಡೆಸಬೇಕು. ಸಮಾಜದಲ್ಲಿ ಉತ್ತಮ ಶಿಕ್ಷಕರಾಗಿ, ವಕೀಲರಾಗಿ, ವೈದ್ಯರಾಗಿ ಹೀಗೆ ಬೇರೆ ಬೇರೆ ಕ್ಷೇತ್ರದಲ್ಲಿ ನಮ್ಮನ್ನು ತೊಡಗಿಸಿಕೊಂಡು ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು ಎಂದು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹೇಳಿದರು.

ಅವರು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನಾ.ಎನ್.ಶೆಟ್ಟಿ, ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಎಸ್.ಆರ್ ಪಬ್ಲಿಕ್ ಸ್ಕೂಲ್ನ ಉಪ ಪ್ರಾಂಶುಪಾಲರಾದ ದೀಪಕ್ ಎನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಸ್.ಆರ್. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಮೃತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.