ಕುಂದಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಬೆಂಗಳೂರು,
ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್.ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು
ಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ
ಆಯ್ಕೆಗೊಂಡಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.












