ದೇಶದಲ್ಲಿ ವಾರ್ಷಿಕ 1.36 ಲಕ್ಷ ಮಂದಿ ಆತ್ಮಹತ್ಯೆ: ಯುವಜನರೇ ಹೆಚ್ಚು; ಮಾಂಡವಿಯ

ಬೆಂಗಳೂರು: ಮಾನಸಿಕ ಒತ್ತಡ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ದೇಶದಲ್ಲಿ ವಾರ್ಷಿಕ 1.36 ಲಕ್ಷ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಪೈಕಿ ಶೇ 70ರಷ್ಟು ಮಂದಿ ಯುವಜನರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಜನರು ಆತ್ಮಹತ್ಯೆಗೆ ಶರಣಾಗತರಾಗುತ್ತಿರುವುದು ಆತಂಕಕಾರಿ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಹೆಚ್ಚಿನವರು 18ರಿಂದ 45 ವರ್ಷದೊಳಗಿನವರಾಗಿದ್ದಾರೆ. ದೈಹಿಕ ಆರೋಗ್ಯಕ್ಕೆ ನೀಡುತ್ತಿರುವ ಮಹತ್ವನ್ನು ಮಾನಸಿಕ ಆರೋಗ್ಯಕ್ಕೆ ನೀಡದಿರುವುದೇ ಇದಕ್ಕೆ ಕಾರಣ ಎಂದರು.