ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಮತ್ತೆ ಶಾಕ್ ಕೊಟ್ಟಿದೆ.
19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ₹ 103.50 ಹೆಚ್ಚಳಗೊಂಡಿದೆ. ಇದರಿಂದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಆದರೆ, ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸದಿರುವುದು ಸಮಾಧಾನಕರವಾದ ವಿಷಯವಾಗಿದೆ.












