ಉಡುಪಿಯಲ್ಲಿ ಮತ್ತೆ 13 ಕೊರೊನಾ ಪಾಸಿಟಿವ್ ದೃಢ

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 13 ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1063ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈವರೆಗೆ ಜಿಲ್ಲೆಯಲ್ಲಿ 953 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 108 ಸಕ್ರಿಯ ಸೋಂಕಿತ ಪ್ರಕರಣಗಳಿವೆ.