ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ 1300ಕ್ಕೂ ಹೆಚ್ಚು ಉಚಿತ ಕನ್ನಡಕ ವಿತರಣೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಸಮಾರಂಭ ಭಾನುವಾರ ಉಡುಪಿ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಣ್ಣಿನ ತಪಾಸಣೆಗೆ ಒಳಪಟ್ಟಿದ್ದ ಶಿಬಿರಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಕನ್ನಡಕ ವಿತರಣೆ ಮಾಡಿದರು.

1300ಕ್ಕೂ ಹೆಚ್ಚು ಕನ್ನಡಕ ವಿತರಣೆ:
ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲೆಯಾದ್ಯಂತ 1300ಕ್ಕೂ ಹೆಚ್ಚು ಉಚಿತ ಕನ್ನಡಕ ವಿತರಣೆ ಮಾಡಲಾಯಿತು. 350ಕ್ಕೂ ಹೆಚ್ಚು ಮಂದಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ತಪಾಸಣೆ ನಡೆಸಲಾಯಿತು.

 

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ. ಕೃಷ್ಣಪ್ರಸಾದ್, ಸೆಲ್ಯುಲರ್ ಫೌಂಡೇಶನ್ ನ ಧರ್ಮ ಪ್ರಸಾದ್ ರೈ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ. ರವಿ ಅಮೀನ್, ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಗೀತಾಂಜಲಿ ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರರಾದ ಗುರು ಪ್ರಸಾದ್ ಶೆಟ್ಟಿ, ಸಹ ವಕ್ತಾರರಾದ ಶಿವ ಕುಮಾರ್, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಸೋನಾ ಪಾಯಿದೆ, ರಜನಿ ಹೆಬ್ಬಾರ್, ರಮಾ ಶೆಟ್ಟಿ, ದಯಾಶಿನಿ, ಲೈಲಾ, ಮಾಯ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಕೇಸರಿ ಯುವರಾಜ್ ವಂದಿಸಿದರು.