ಮುಂಬೈ: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಡ್ರಗ್ಸ್ ಜಾಲದ ನಂಟಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಮುಂಬೈನ ಮ್ಯಾಜೀಸ್ಟೆಟರ್ ನ್ಯಾಯಾಲಯ ಸೆ. 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಡ್ರಗ್ಸ್ ಜಾಲದ ನಂಟಿನ ಆರೋಪದಡಿ ರಿಯಾಳನ್ನು ಬಂಧಿಸಿರುವ ಎನ್ ಸಿಬಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿರುವ ನ್ಯಾಯಾಲಯ ರಿಯಾಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಜಾಮೀನಿಗೆ ಅರ್ಜಿ
ಈ ನಡುವೆ ರಿಯಾಳ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಯುತ್ತಿದೆ. ಜಾಮೀನು ಸಿಗದಿದ್ದರೆ ರಿಯಾಳಿಗೆ 14 ದಿನಗಳ ಜೈಲು ವಾಸ ಖಚಿತ ಎನ್ನಲಾಗುತ್ತಿದೆ.