ಒಂದೇ ರಂಗಸ್ಥಳ; 153 ಯಕ್ಷಗಾನ ವೇಷಗಳು: ಯಕ್ಷರಂಗದಲ್ಲಿ ಪ್ರಪ್ರಥಮ ಪ್ರಯೋಗ

ಮಂಗಳೂರು: ಮಂಗಳೂರಿನ ಇತಿಹಾಸ ಪ್ರಸಿದ್ದ ಕದ್ರಿ ದೇವಸ್ಥಾನದಲ್ಲಿ ಭಾನುವಾರ ಸನಾತನ ಯಕ್ಷಾಲಯದ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಶೀದೇವಿ ಲಲಿತೋಪಾಖ್ಯಾನ ಪ್ರಸಂಗ ನಡೆಯಲಿದ್ದು, ಇದೇ ಮೊದಲ ಬಾರಿಗೆ ಒಂದೇ ರಂಗಸ್ಥಳದಲ್ಲಿ 153 ವೇಷಗಳು ಮೇಳೈಸಿ ಇತಿಹಾಸ ಸೃಷ್ಟಿಯಾಗಲಿದೆ.

ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕದ್ರಿ ದೇವಸ್ಥಾನದಲ್ಲಿ ಯಕ್ಷಗಾನ ಪ್ರಸಂಗ ನಡೆಯಲಿದೆ. ಸಂಜೆ 5 ರಿಂದ ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಈ ಯಕ್ಷಗಾನವನ್ನು ನಿರ್ದೇಶಿಸಲಿದ್ದಾರೆ.

 

ನಾಳೆ ನಡೆಯಲಿರುವ ಯಕ್ಷಗಾನ ಪ್ರಸಂಗಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವಿಟರ್ ನಲ್ಲಿ ಶುಭ ಹಾರೈಸಿದ್ದಾರೆ.