ಉಡುಪಿಯಲ್ಲಿ ಇಂದು 156 ಮಂದಿ ಕೊರೊನಾದಿಂದ ಗುಣಮುಖ: ಐವರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 156 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 57 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 99 ಮಂದಿ ಸಹಿತ 156 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7557 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10236 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2590 ಸಕ್ರಿಯ ಕೊರೊನಾ ಸೋಂಕಿತರಿದ್ದು, 1034 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1556 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

*ಕೊರೊನಾಗೆ ಐವರು ಬಲಿ*
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಐಬರು ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 75 ವೃದ್ಧ, 55 ವರ್ಷದ ವ್ಯಕ್ತಿ ಹಾಗೂ ಕಾರ್ಕಳ ತಾಲ್ಲೂಕಿನ 85 ವರ್ಷದ ಇಬ್ಬರು ವೃದ್ಧೆಯರು, 49 ವರ್ಷದ ಮಹಿಳೆ  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.