ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ತ್’ ಈ ಬಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜನವರಿ 8 ಭಾನುವಾರದಂದು ಅದ್ದೂರಿಯಾಗಿ ನಡೆಯಿತು.
ದಿನಪೂರ್ತಿ ನಡೆದ ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಇದರ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ ಭಾರತ ಕವನ ವಾಚನ ಸ್ಪರ್ಧೆ ನಡೆಯಿತು. ಕೊಂಕಣಿ ಬರಹಗಾರ, ನ್ಯಾಯವಾದಿ ಸಂತೋಶ್ ಪೆರ್ಲ ಹಾಗೂ ಕೊಂಕಣಿ-ಕನ್ನಡ ಕವಿ ವಿಲ್ಸನ್ ಕಟೀಲ್ ಅವರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು. ಕವಿತಾ ಟ್ರಸ್ಟ್ ಟ್ರಸ್ಟಿಗಳಾದ ವಿಲ್ಲಿಯಂ ಪಾಯ್ಸ್ ಹಾಗೂ ಟೈಟಸ್ ನೊರೊನ್ಹಾ ಸಂವಾದವನ್ನು ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೊಂಕಣಿ ಕವಿ ಹಾಗೂ ಸಾಹಿತಿ ವಿಲ್ಸನ್ ಕಟೀಲ್ ರಚನೆಯ ‘ಚಿತುರ್ಲೆಚೆ ಅಚ್ಛೇ ದಿನ್’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ನಿರಾಕರ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪ್ರಶಾಂತ್ ನಾಯ್ಕ್ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದರು.
ಗೀತರಚನೆಕಾರ ರತ್ನಮಾಲ ದಿವಾಕರ್ ಹಾಗೂ ಅನಿವಾಸಿ ಉದ್ಯಮಿಗಳು ಉಪಸ್ಥಿತರಿದ್ದರು.
ಹಿರಿಯ ಕೊಂಕಣಿ ಕವಯತ್ರಿ ಇಂದು ಅಶೋಕ್ ಗೇರುಸೊಪ್ಪೆಯವರಿಗೆ ಮಥಾಯಸ್ ಕುಟಾಮ್ ಕವಿತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.