18 ಬಿಜೆಪಿ‌ ಶಾಸಕರ ಅಮಾನತು ಪೂರ್ವಯೋಜಿತ: ಶಾಸಕ ಸುನಿಲ್ ಕುಮಾರ್

ಉಡುಪಿ: ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿಯ ಹದಿನೆಂಟು ಮಂದಿ ಶಾಸಕರನ್ನು ಅಮಾನತು ಮಾಡಿರುವುದು ಪೂರ್ವಯೋಜಿತ. ಸರಕಾರ, ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಈ ನಿರ್ಣಯ ಮಾಡಿದ್ದಾರೆ. ಇದು ಸರಿಯಲ್ಲ ಎಂದು ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಹೇಳಿದ್ದಾರೆ.

ಶಾಸಕರನ್ನು ಅಮಾನತು ಮಾಡುವ ಒಂದು ವಾರದ ಮೊದಲೇ ಬಿಜೆಪಿ ಶಾಸಕರನ್ನು ಎತ್ತಿ ಬಿಸಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಶಾಸಕರ ಅಮಾನತು ನಿರ್ಣಯ ಪೂರ್ವಯೋಜಿತ ಎಂಬ ಅನುಮಾನ ಬರುತ್ತಿದೆ. ತಕ್ಷಣ ಈ ಅಮಾನತು ಆದೇಶವನ್ನು ವಾಪಾಸ್ ತೆಗೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.