ಉಡುಪಿಯಲ್ಲಿ ಇಂದು 180 ಮಂದಿ ಕೊರೊನಾದಿಂದ ಗುಣಮುಖ: ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 180 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 50 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 130 ಮಂದಿ ಸಹಿತ 180 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7737 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಇಂದು ಜಿಲ್ಲೆಯಲ್ಲಿ 217 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10453 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇನ್ನೂ 2625 ಸಕ್ರಿಯ ಕೊರೊನಾ ಸೋಂಕಿತರಿದ್ದು, 1041 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1584 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೊರೊನಾಗೆ ಇಬ್ಬರು ಬಲಿ
ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 87 ವೃದ್ಧ ಹಾಗೂ ಕುಂದಾಪುರ ತಾಲ್ಲೂಕಿನ 67 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.