ಧೆಂಕನಲ್ (ಒಡಿಶಾ): ಧೆಂಕನಲ್ ಜಿಲ್ಲೆಯ ಮೆರಮಂಡಲಿಯಲ್ಲಿರುವ ಟಾಟಾ ಸ್ಟೀಲ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿ, 19 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 ವಿದ್ಯುತ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ ಎಂದು ಟಾಟಾ ಸ್ಟೀಲ್ಸ್ ತಿಳಿಸಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಅಪಘಾತ ಸಂಭವಿಸಿತು. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸ್ಥಾವರದ ಆವರಣದಲ್ಲಿರುವ ಆರೋಗ್ಯ ಕೇಂದ್ರ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್ನ ಅಶ್ವಿನಿ ಆಸ್ಪತ್ರೆಗೆ ರವಾನಿಸಲಾಗಿದೆ.
ಧೆಂಕನಾಲ್ನಲ್ಲಿರುವ ಟಾಟಾ ಸ್ಟೀಲ್ BFPP2 ವಿದ್ಯುತ್ ಸ್ಥಾವರದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿಸಲು ನಾವು ವಿಷಾದಿಸುತ್ತೇವೆ. ಸಂಬಂಧಿತ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮದೇ ಆಂತರಿಕ ತನಿಖೆ ನಡೆಸುತ್ತೇವೆ. ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ ಎಂದು ಟಾಟಾ ಸ್ಟೀಲ್ಸ್ ತಿಳಿಸಿದೆ.
ಅಶ್ವಿನಿ ಆಸ್ಪತ್ರೆಯ ಡಾ.ಸುಬ್ರತ್ ಜೆನಾ ಮಾತನಾಡಿ, “ಮೆರಮಂಡಲಿಯ ಟಾಟಾ ಸ್ಟೀಲ್ ಸ್ಥಾವರದಿಂದ ಒಟ್ಟು 19 ಗಾಯಳುಗಳನ್ನು ಚಿಕಿತ್ಸೆಗಾಗಿ ಇಲ್ಲಿಗೆ ಕರೆತರಲಾಗಿದೆ. ಅವರೆಲ್ಲರೂ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. 19 ಗಾಯಳುಗಳಲ್ಲಿ ಇಬ್ಬರು ಮೂಳೆ ಮುರಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 6 ಮಂದಿಗೆ ಶೇ 40% ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿವೆ. ಒಬ್ಬರಿಗೆ ಕಡಿಮೆ ಪ್ರಮಾಣದ ಸುಟ್ಟಗಾಯಗಳಾಗಿದ್ದು, ಶೇ.70ರಷ್ಟು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.
ಮಹಾರಾಷ್ಟ್ರದಲ್ಲಿ ತೈಲ ಟ್ಯಾಂಕರ್ ಅಪಘಾತ: ಮುಂಬೈ- ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಬರುವ ಲೋನಾವಾಲಾ ಮೇಲ್ಸೇತುವೆಯಲ್ಲಿ ಅಪಘಾತಕ್ಕೀಡಾದ ನಂತರ ತೈಲ ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಂಡಿದ್ದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಅಗ್ನಿಶಾಮದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಲೋನಾವಾಲಾ ಮೇಲ್ಸೇತುವೆ ಬದಲಾಗಿ ವಾಹನಗಳಿಗೆ ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಎಕ್ಸ್ಪ್ರೆಸ್ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿರುವುದರಿಂದ ತ್ವರಿತವಾಗಿ ಮೇಲ್ಸೇತುವೆಯಿಂದ ತೈಲ ಟ್ಯಾಂಕರ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ: ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿಂದು ಘಟನೆ ನಡೆದಿದೆ. ಇಲ್ಲಿನ ಎಲ್ಒಸಿ ಬಳಿಯ ದುಬ್ನಾರ್ ಮಜಲ್ ಪ್ರದೇಶದಲ್ಲಿ ಶೋಧ ನಡೆಯಿತು. ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಕುಪ್ವಾರದ ದುಬ್ನಾರ್ ಮಜಲ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪೊಲೀಸರು ಮತ್ತು ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ. ರಾಜ್ಯ ಪೊಲೀಸ್, ಹೆದ್ದಾರಿ ಪೊಲೀಸರು, ಐಎನ್ಎಸ್ ಶಿವಾಜಿ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.