ಉಡುಪಿ: ಇತ್ತೀಚೆಗೆ ಮೃತಪಟ್ಟ ಮಲ್ಪೆ ಬಡಾನಿಡಿಯೂರು ಗ್ರಾಮದ ಮೀನುಗಾರ ಭಾಗ್ಯರಾಜ್ ಅವರ ಮನೆಗೆ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಮೀನುಗಾರರ ಸಂಕಷ್ಟ ನಿಧಿಯಿಂದ 2 ಲಕ್ಷ ಮೊತ್ತದ ಚೆಕ್ ವಿತರಿಸಿ ಮೃತರ ಪೋಷಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಶರತ್ ಬೈಲಕೆರೆ, ಪ್ರಮುಖರಾದ ಮಂಜು ಕೊಳ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.