ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟಹಾಕಿದೆ. ಇಬ್ಬರೂ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಇ ತೈಬಾ (ಎಲ್ಇಟಿ) ಗೆ ಸೇರಿದವರು ಮತ್ತು ಇಬ್ಬರಲ್ಲಿ ಒಬ್ಬ ತುಫೈಲ್, ಪಾಕಿಸ್ತಾನದವನಾಗಿದ್ದಾನೆ ಎಂದು ವರದಿಗಳು ತಿಳಿಸಿವೆ.
ಇನ್ನಷ್ಟು ಉಗ್ರರಿಗಾಗಿ ಶೋಧ ಮುಂದುವರಿದಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಕುಪ್ವಾರದ ಚಕ್ರಸ್ ಕಂಡಿ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಸೋಮವಾರ ಮುಂಜಾನೆ, ಸೋಪೋರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಯೊಂದಿಗೆ ಸಂಬಂಧ ಹೊಂದಿರುವ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.
ಕಣಿವೆ ಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ ಪೋಲೀಸ್ ಹಾಗೂ ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕುವ ಕಾರ್ಯವನ್ನು ತೀವ್ರಗೊಳಿಸಿದೆ.