ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1 ಅನ್ನು ಮಾರ್ಚ್ 01 ರಿಂದ 22 ರವರೆಗೆ ನಡೆಸಿತ್ತು. ರಾಜ್ಯದಾದ್ಯಂತ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮೌಲ್ಯಮಾಪನ ಅದಾಗಲೇ ಪೂರ್ಣಗೊಂಡಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ.