ಜ. 12, 13ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ
ಉಡುಪಿ: ಸಂಚಲನ ಸಂಸ್ಥೆ ಹಾಗೂ ಉನ್ನತಿ ಕೆರಿಯರ್ ಅಕಾಡೆಮಿ ಸಹಯೋಗದಲ್ಲಿ ಜ.12 ಹಾಗೂ 13 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ತಿಳಿಸಿದರು. ಬೃಹತ್ ಉದ್ಯೋಗ ಮೇಳದಲ್ಲಿ ಸ್ಥಳೀಯ ಹಾಗೂ ಬೆಂಗಳೂರಿನ ಪ್ರತಿಷ್ಠಿತ 150 ಕಂಪನಿಗಳು ಭಾಗವಹಿಸಲಿವೆ. ಸುಮಾರು 5 ಸಾವಿರ ಮಂದಿಗೆ ಉದ್ಯೋಗಾವಕಾಶ ನೀಡುವ ಉದ್ದೇಶವಿದೆ. ಶೇ 50ರಷ್ಟು ಉದ್ಯೋಗಗಳನ್ನು ಸ್ಥಳೀಯವಾಗಿ ಒದಗಿಸುವ ಪ್ರಯತ್ನ ನಡೆಸಲಾಗುತ್ತದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಉದ್ಯೋಗ […]
ಅಮೆರಿಕಕ್ಕೆಭಾರತದ ನೂತನ ರಾಯಭಾರಿಯಾಗಿ ಹರ್ಷವರ್ಧನ್ ಶೃಂಗಲಾ ನೇಮಕ
ನವದೆಹಲಿ: ಅಮೆರಿಕಕ್ಕೆ ಭಾರತದ ನೂತನ ರಾಯಭಾರಿಯಾಗಿ ಹರ್ಷವರ್ಧನ್ ಶೃಂಗಲಾ ಗುರುವಾರ ನೇಮಕಗೊಂಡಿದ್ದಾರೆ. 1984ನೇ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿಯಾಗಿರುವ ಹರ್ಷವರ್ಧನ್, ನವತೇಜ್ ಸರ್ನಾ ಅವರಿಂದ ಅಧಿಕಾರ ಪಡೆದುಕೊಳ್ಳಲಿದ್ದಾರೆ. ಶೀಘ್ರದಲ್ಲಿಯೇ ಅವರು ಕರ್ತವ್ಯ ಆರಂಭಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ತಿಳಿಸಿದೆ.